ವಾಣಿಜ್ಯ ಜಾಹಿರಾತು

ಮಂಗಳೂರು: ‌ನಗರದಲ್ಲಿ ಪೊಲೀಸ್ ಇಲಾಖೆಯ ಅನುಮತಿ ಪಡೆಯದೇ ಡ್ರೋನ್ ಹಾರಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ DGCA DIGITAL SKY PLATFORM ನಲ್ಲಿ ರಿಜಿಸ್ಟರ್ ಆಗದೇ ಡ್ರೋನ್ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಿದೆ ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಪರ್ಮಿಷನ್ ಇಲ್ಲದೆ ಡ್ರೋನ್ ಹಾರಿಸುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ನಗರದಲ್ಲಿ ಸಾಕಷ್ಟು ಕೈಗಾರಿಕೆ ಪ್ರದೇಶ, ಪುವಾಸಿ ತಾಣ, ಧಾರ್ಮಿಕ ಕ್ಷೇತ್ರ, ವಿದ್ಯಾ ಸಂಸ್ಥೆ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರು, ತೈಲ ಸಂಗ್ರಾಹಣ ಕೇಂದ್ರ ಹಾಗೂ ಇನ್ನಿತರೆ ಸೂಕ್ಷ್ಮ ಪ್ರದೇಶಗಳಿದೆ. ಹೀಗಾಗಿ ಇವುಗಳ ಭದ್ರತೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಎಜಿಸಿಎ ಅವರಿಂದ ಪರವಾನಗಿ ಪಡೆದು ನ್ಯಾನೋ ಡ್ರೋನ್ ಹೊರತುಪಡಿಸಿ ಇನ್ನುಳಿದ ಎಲ್ಲಾ ವರ್ಗದ ಡೋನ್‌ನ್ನು ಉಪಯೋಗಿಸಲು ಕಮಿಷನರ್ ಕಚೇರಿಯಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆಯಲು ಸೂಚಿಸಲಾಗಿದೆ.

ಒಂದು ವೇಳೆ ಅನುಮತಿ ಇಲ್ಲದೇ ಡ್ರೋನ್ ಹಾರಿಸಿದ್ದಲ್ಲಿ ಅವರ ವಿರುದ್ಧ AIRCRAFT ACT 1934 SEC 10, 11, 11A ಹಾಗೂ DRONE RULES 2021 ರ ನಿಯಮ 49 ಮತ್ತು 50 ರಂತೆ ಪುಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.