ವಾಣಿಜ್ಯ ಜಾಹಿರಾತು

ಬೆಂಗಳೂರು: ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, H3N2 ನಿಂದ ದೇಶದಲ್ಲಿ ಸೋಂಕು ಹೆಚ್ಚಳವಾಗಿದ್ದು ಇದರಿಂದ ಅನೇಕರು ಗಾಬರಿಯಾಗಿದ್ದಾರೆ. ಹೀಗಾಗಿ ಉನ್ನತ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಿದ್ದು, ಗಾಬರಿಯಾಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಬೇಕು ಎಂದು ಹೇಳಿದರು.

ಇತ್ತೀಚೆಗೆ ಮಾಸ್ಕ್ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಧರಿಸುತ್ತಿಲ್ಲ. ಇದೀಗ ಎಲ್ಲಾ ಆರೋಗ್ಯ ಸಿಬ್ಬಂದಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಅಲ್ಲದೆ ಇನ್ ಫ್ಲ್ಯೂಯೆಂಜಾಗೆ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಿಬ್ಬಂದಿಗೆ ಸಚಿವರು ಸೂಚಿಸಿದರು.

ಐಸಿಯುನಲ್ಲಿ ಕೆಲಸ ಮಾಡುವ ಆರೋಗ್ಯ ಸಿಬ್ಬಂದಿಗಳಿಗೆ ಸರ್ಕಾರದಿಂದಲೇ ವ್ಯಾಕ್ಸಿನ್ ನೀಡಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲಿ ಐಸಿಯುನಲ್ಲಿ ಕೆಲಸ ಮಾಡುವ ಸಿಬ್ಬಂದಿ ಇನ್ ಫ್ಲ್ಯೂಯೆಂಜಾ ಸರ್ಕಾರದ ವತಿಯಿಂದ ವ್ಯಾಕ್ಸಿನ್ ನೀಡಲಾಗುತ್ತದೆ. ವಾಣಿವಿಲಾಸ ಮತ್ತು ವಿಕ್ಟೋರಿಯಾದಲ್ಲಿ 25 ಟೆಸ್ಟ್‍ಗಳನ್ನು ಟೆಸ್ಟಿಂಗ್ ಮಾಡಲಾಗುತ್ತದೆ. 15 ವರ್ಷ ಕೆಳಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಸುಲಭವಾಗಿ ಸೋಂಕು ಹರಡುವ ಸಾಧ್ಯತೆ ಇದ್ದು, ಗರ್ಭಿಣಿಯರಿಗೆ ಸೋಂಕು ಬರುವ ಸಾಧ್ಯತೆ ಇದೆ. ಹೀಗಾಗಿ ಇವರೆಲ್ಲ ಎಚ್ಚರಿಕೆ ವಹಿಸಬೇಕು. ಶುಚಿತ್ವದ ಬಗ್ಗೆ ಗಮನ ಕೊಡಬೇಕು. ಕೆಮ್ಮುವಾಗ, ಸೀನುವಾಗ ಮುಖ ಕವರ್ ಮಾಡಿಕೊಳ್ಳಬೇಕು. ಕೈಯನ್ನು ಆಗಾಗ ಸೋಪಿನಿಂದ ತೊಳೆದುಕೊಳ್ಳಬೇಕು ಎಂದು ಹೇಳಿದರು.

ಹೆಚ್1 ಎನ್ 1- 20 ಕೇಸ್, ಹೆಚ್ 3 ಎನ್ 2 – 26 ಕೇಸ್ ಇದೆ. ಆಂಟಿಬಯೋಟಿಕ್ ತೆಗೆದುಕೊಳ್ಳಬೇಡಿ. ಫೆಬ್ರವರಿಯಲ್ಲಿಯೇ ತಾಪಮಾನ ಹೆಚ್ಚಾಗಿದೆ. ಹವಾಮಾನ ವೈಪರೀತ್ಯವೂ ಕಾರಣವಾಗಿದೆ. ಹೀಟ್ ವೇವ್ ನಿಂದ ಜನ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. 11 ರಿಂದ 3 ಗಂಟೆ ಅನಗತ್ಯವಾಗಿ ಬಿಸಿಲಿಗೆ ನೇರವಾಗಿ ಹೋಗಬೇಡಿ. ಹೀಟ್ ವೇವ್ ನಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಹೆಚ್ಚು ನೀರು ಕುಡಿಯಿರಿ. ಮಜ್ಜಿಗೆ ಎಳನೀರು ಸೇವಿಸಿ ಎಂದು ಸಚಿವರು ಸಲಹೆ ನೀಡಿದರು.

ಹೆಚ್ 3 ಎನ್ 2 ನಿಂದ ಡೆತ್ ಕೇಸ್ ಇಲ್ಲ. ಕೋವಿಡ್ ಬಂದವರಿಗೆ ಈ ವೈರಸ್ ಬಂದಾಗ ದೀರ್ಘಕಾಲಿಕ ಕೆಮ್ಮು ಬರುತ್ತೆ. ಪ್ರತ್ಯೇಕ ಮಾರ್ಗಸೂಚಿ ಇರುತ್ತೆ. ಕೋವಿಡ್ ಟೆಸ್ಟ್ ಮಾದರಿಯಲ್ಲಿ ಟೆಸ್ಟಿಂಗ್ ಇರುತ್ತೆ. ಕೆಲ ಆಸ್ಪತ್ರೆಯವರು ಮೂರೂವರೆ ಸಾವಿರ ತಗೋತಾರೆ. ಹೀಗಾಗಿ ಟೆಸ್ಟಿಂಗ್ ದರ ನಿಗದಿ ಮಾಡ್ತೀವಿ ಎಂದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.