ನವದೆಹಲಿ: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಹಾಗೂ ಆಗಸ್ಟ್ 15 ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಂದು ಪಾಕಿಸ್ತಾನದ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದು, ಇದಕ್ಕೆ ಐಎಸ್‍ಐ ನೆರವು ನೀಡುತ್ತಿದೆ ಎಂಬ ಸ್ಫೋಟಕ ಮಾಹಿತಿ ಗುಪ್ತಚರ ಇಲಾಖೆಗೆ ಸಿಕ್ಕಿದೆ.
ಐಎಸ್‍ಐ ಬೆಂಬಲಿತ ಲಷ್ಕರ್ ಇ ತೋಯ್ಬಾ ಹಾಗೂ ಜೈಶ್ ಎ ಮೊಹಮ್ಮದ್ ಉಗ್ರರು, ಅಯೋಧ್ಯೆ ಸೇರಿದಂತೆ ಭಾರತದ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ ನಡೆಸಲು ಸಜ್ಜಾಗುತ್ತಿದ್ದಾರೆ. ಮೂರರಿಂದ ಐದು ಗುಂಪುಗಳಾಗಿ ಈ ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದು, ಈ ಎಲ್ಲಾ ಭಯೋತ್ಪದಕರಿಗೆ ಅಫ್ಘಾನಿಸ್ತಾನದಲ್ಲಿ ತರಭೇತಿ ನೀಡಲಾಗಿದೆ ಎಂದು ರಾ ವರದಿ ಮಾಡಿದೆ.
ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭಾರೀ ದಾಳಿ ನಡೆಸಲು ಪಾಕಿಸ್ತಾನ 20 ಮಂದಿ ತಾಲಿಬಾನ್ ಉಗ್ರರಿಗೆ ಪಾಕಿಸ್ತಾನದಲ್ಲಿ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿಯು ಗುಪ್ತಚರ ಇಲಾಖೆ ನೀಡಿದೆ.
ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಇದೇ ದಿನ ಕಳೆದ ವರ್ಷ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ತೆಗೆದು ಹಾಕಲಾಗಿತ್ತು.
ದೆಹಲಿ, ಅಯೋಧ್ಯೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದಕರ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೆ ಈ ಸ್ಥಳಗಳಲ್ಲಿ ವಿಶೇಷ ತಂಡಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆ ರಾಮ ಮಂದಿರದ ಮೇಲೆ ಉಗ್ರರ ದಾಳಿ ಸಂಚು: ಗುಪ್ತಚರ ಇಲಾಖೆಗೆ ಮಾಹಿತಿ
ವಾಣಿಜ್ಯ ಜಾಹಿರಾತು
ವಾಣಿಜ್ಯ ಜಾಹಿರಾತು