ವಾಣಿಜ್ಯ ಜಾಹಿರಾತು
ಮೂಡಬಿದ್ರೆ :ಮೂಲ್ಕಿ -ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಿಥುನ್ ರೈ ಕರ್ನಾಟಕ ವಿಧಾನಸಭೆ ಚುನಾವಣೆ ಅಂಚಿನಲ್ಲಿ ಹೊಸ ವಿವಾದವೊಂದನ್ನು ಮೈಗೆಳೆದು ಕೊಂಡಿದ್ದಾರೆ.ಕಳೆದ ತಿಂಗಳು ಮೂಡಬಿದ್ರೆ ಸಮೀಪದ ಪುತ್ತಿಗೆ ಯಲ್ಲಿ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯ ಕ್ರಮದಲ್ಲಿ ನೀಡಿರುವ ಹೇಳಿಕೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸಾಮಾಜಿಕ ಸಹಬಾಳ್ವೆಯ ಜೀವನದ ಕುರಿತು ಮಾತುಗಳನ್ನಾಡುತ್ತಿರುವ ಸಂದರ್ಭದಲ್ಲಿ ‘ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು’ ಎಂದು ಯುವನಾಯಕ ತುಳುವಿನಲ್ಲಿ ಹೇಳಿರುವ ವಿಡಿಯೋ ತುಣುಕೊಂದು ಎಲ್ಲೆಡೆ ಹರಿದಾಡುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕ ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಿಥುನ್ ರೈ ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯ ನೂರಾನಿ ಮಸೀದಿಯ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.ಸದ್ಯ ಸಾಮಾಜಿಕ ತಾಣಗಳಲ್ಲಿ ಈ ಕುರಿತು ಭಾರಿ ಚರ್ಚೆ ಹುಟ್ಟು ಹಾಕಿದೆ.
ವಾಣಿಜ್ಯ ಜಾಹಿರಾತು