ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಭರತ್ ಶೆಟ್ಟಿಯವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಭರತ್ ಶೆಟ್ಟಿಯವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಚೇತರಿಸಿಕೊಳ್ಳುತ್ತಿದ್ದೇನೆ. ಕೆಲ ದಿನ ಚಿಕಿತ್ಸೆಗೆ ಒಳಪಡಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ, ಮುಖಕ್ಕೆ ಮಾಸ್ಕ್ ಧರಿಸುವ ಮೂಲಕ ಕೊರೊನಾದಿಂದ ತಮ್ಮನ್ನು ಹಾಗೂ ಇತರರನ್ನು ರಕ್ಷಿಸಿ ಅಂತ ಮನವಿಮಾಡಿದ್ದಾರೆ.
I have been tested COVID19 positive.
With all your blessings, I'm recovering & will be under treatment for few days.Requesting everyone to please maintain social distancing, wear mask while going out and wash hands frequently.
Please take care of yourselves & your near one's.— Dr Bharath Shetty (@bharathshetty_y) July 2, 2020