ಉಡುಪಿ: ಅಜಾತಶತ್ರು, ಸರಳ ಸಜ್ಜನ ರಾಜಕಾರಣಿ, ಈ ದೇಶ ಕಂಡ ಅತ್ಯುತ್ತಮ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಪ್ರಯುಕ್ತ ಡಿಸೆಂಬರ್ 24 ಮತ್ತು 25 ರಂದು ಉಡುಪಿಯಲ್ಲಿ ಹಮ್ಮಿಕೊಂಡಿರುವ “ಅಟಲ್ ಉತ್ಸವ” ವನ್ನು ಎಲ್ಲರೂ ಸೇರಿ ಸಂಘಟಿತರಾಗಿ ಯಶಸ್ವಿಗೊಳಿಸೋಣ ಎಂದು ಶಾಸಕ ಶ್ರೀ ಕೆ ರಘುಪತಿ ಭಟ್ ತಿಳಿಸಿದರು.
ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ “ಅಟಲ್ ಉತ್ಸವ” ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರ ಪೂರ್ವ ತಯಾರಿ ಬಗ್ಗೆ ಬಿಜೆಪಿ ಬೂತ್ ಸಮಿತಿಗಳ ಅಧ್ಯಕ್ಷರೊಂದಿಗೆ ಇಂದು ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಅಟಲ್ ಉತ್ಸವದ ಅಂಗವಾಗಿ ಡಿ. 24 ರಂದು ಹೊನಲು ಬೆಳಕಿನ ರಾಷ್ಟ್ರ ಮಟ್ಟದ ಮುಕ್ತ ಪ್ರೋ ಕಬಡ್ಡಿ ಪಂದ್ಯಾಟ “ಅಟಲ್ ಟ್ರೋಫಿ” ನಡೆಯಲಿದ್ದು, ಡಿ.25ರಂದು “ಬೂತ್ ಸಂಗಮ” ನಡೆಯಲಿದೆ.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿ ಅಮೀನ್, ರಾಜ್ಯ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕಾರ್ಯಕ್ರಮದ ಸಂಚಾಲಕರಾದ ಉಮೇಶ್ ನಾಯ್ಕ್, ಗಿರೀಶ್ ಅಂಚನ್ ಹಾಗೂ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ ಉಪಸ್ಥಿತರಿದ್ದರು.