ವಾಣಿಜ್ಯ ಜಾಹಿರಾತು
ಮೂಡುಬಿದಿರೆ: ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರದಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು ಎಂದು ಶಂಕಿಸಲಾಗಿದೆ.
ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಮೃತ ವಿದ್ಯಾರ್ಥಿನಿ.
ಜ್ಯೋತಿನಗರದ ಮಯ್ಯದ್ದಿ, ರಮ್ಲಾತ್ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು. ಕಳೆದ ಕೆಲವು ದಿನಗಳಿಂದ ಆಕೆ ವಿಪರೀತ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಆಕೆಯ ದೇಹದಲ್ಲಿ ಏಕಾಏಕಿ ಬಿಳಿ ರಕ್ತ ಕಣಗಳ ಕುಸಿತ ಸಮಸ್ಯೆ ಉಲ್ಬಣಿಸಿ ನಿಧನಹೊಂದಿದ್ದಾಳೆ.
ಬಿಳಿ ರಕ್ತ ಕಣಗಳ ಕುಸಿತ ದಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಸ್ಥಳೀಯವಾಗಿ ಡೆಂಗ್ಯೂ ಬಗ್ಗೆ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ವಾಣಿಜ್ಯ ಜಾಹಿರಾತು