ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂ.17ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿಂದತೆ ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಜೂ,16 ಮತ್ತು 17ರಂದು ಆರೆಂಜ್ ಅಲರ್ಟ್ ಮುಂದುವರಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
The entire Karnataka state is very likely to experience widespread rainfall till June 17. An orange alert (very heavy rainfall) has been put in place for coastal districts till June 17: CS Patil, Director, IMD Bengaluru pic.twitter.com/Jbj2DoQvZx
— ANI (@ANI) June 13, 2021
ದಕ್ಷಿಣಕನ್ನಡ, ಉಡುಪಿ, ಕೊಡಗು, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಜೂ,16 ರಿಂದ 17ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಇದೇ 17ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.