ವಾಣಿಜ್ಯ ಜಾಹಿರಾತು
ಪಡುಬಿದ್ರಿ : ವರ್ಕ್ ಫ್ರಂ ಹೋಂ ಮೂಲಕ ಕೆಲಸ ಮಾಡುತ್ತಿದ್ದ ಹೈದರಾಬಾದ್‌ನ ವಿಪ್ರೋ ಕಂಪನಿಯ ಉದ್ಯೋಗಿಯಾಗಿದ್ದ ಸೌಜನ್ಯ(22) ಎಂಬ ಯುವತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ನಡ್ಸಾಲು ಗ್ರಾಮದ ಸೌಜನ್ಯ ಎಂಬ ಯುವತಿ ಹೈದರಾಬಾದ್‌ನ ವಿಪ್ರೋ ಕಂಪನಿಯ ಉದ್ಯೋಗಿಯಾಗಿದ್ದರು. ಅವರು ಕಳೆದ 10 ತಿಂಗಳಿನಿಂದ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು. ಯಾವುದೋ ಕಾರಣದಿಂದ ಜೀವನದಲ್ಲಿ ನೊಂದು ಕೆಲಸ ಮಾಡಿಕೊಂಡಿರುತ್ತಿದ್ದ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಕುರಿತಾಗಿ ಮೃತರ ತಂದೆ ರಾಮಕೃಷ್ಣ ಕೋಟ್ಯಾನ್ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಣಿಜ್ಯ ಜಾಹಿರಾತು