ವಾಣಿಜ್ಯ ಜಾಹಿರಾತು

ಉಡುಪಿ : ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ಐದು ವರ್ಷಗಳ ಅವಧಿಗೆ ನಿಷೇಧಿಸಿದ್ದು, ಈ ನಿರ್ಧಾರವನ್ನು ಪೇಜಾವರ ಶ್ರೀಗಳು ಸ್ವಾಗತಿಸಿದ್ದಾರೆ. ಪಿಎಫ್ಐ ನಿಷೇಧಿಸಿರುವುದರಿಂದ ತುಂಬಾ ನೆಮ್ಮದಿಯಾಯಿತು. ಸಮಾಜ ವಿರೋಧಿ ಚಟುವಟಿಕೆ ನಡೆಸುವವರಿಗೆ ಇದೊಂದು ಪಾಠವಾಗಬೇಕು. ಸಮಾಜದಲ್ಲಿ ಯಾರೂ ಕೂಡ ವಿದ್ವಂಸಕ ಕೃತ್ಯ ಮಾಡಬಾರದು. ಸರಕಾರವು ಕೂಡ ಕಾಲಕಾಲಕ್ಕೆ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಇಂತಹ ಶಕ್ತಿಗಳು ಮರುಹುಟ್ಟು ಪಡೆಯದಂತೆ ನೋಡಿಕೊಳ್ಳಬೇಕು. ಸಮಾಜ ಮತ್ತು ರಾಜಕೀಯ ಪಕ್ಷಗಳು ಇಂತಹ ಸಂಘಟನೆಗಳಿಗೆ ಪ್ರೋತ್ಸಾಹ ನೀಡಬಾರದು. ಇಂತಹ ದುಷ್ಕೃತ್ಯ  ಮಾಡುವವರನ್ನು ಆರಂಭದಲ್ಲೇ ಚಿವುಟಬೇಕು. ಆಗಷ್ಟೇ ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಸ್ವಾಮೀಜಿ ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.