ವಾಣಿಜ್ಯ ಜಾಹಿರಾತು

ನವದೆಹಲಿ: ಜನಪ್ರಿಯ ಹಾಸ್ಯನಟ , ಸ್ಟ್ಯಾಂಡ್ ಅಪ್ ಕಾಮಿಡಿಯನ್ ರಾಜು ಶ್ರೀವಾಸ್ತವ(58) ಅವರು ನಿಧನರಾಗಿದ್ದಾರೆ.

ಆ.10ರಂದುಹೃದಯಾಘಾತದ ಕಾರಣ ರಾಜು ಶ್ರೀವಾಸ್ತವ್ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೇ ದಿನ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು . ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರದೇ ಇಂದು ಕೊನೆಯುಸಿರೆಳೆದಿದ್ದಾರೆ.
ದೆಹಲಿಯ ಹೋಟೆಲ್‌ನ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಅವರಿಗೆ ಹೃದಯಾಘಾತವಾಗಿತ್ತು ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು,ಅಭಿಮಾನಿಗಳು ಶ್ರೀವಾಸ್ತವ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

1980 ರ ದಶಕದಿಂದ ಮನರಂಜನಾ ಉದ್ಯಮದಲ್ಲಿ ಸಕ್ರಿಯರಾಗಿದ್ದ ರಾಜು ಶ್ರೀವಾಸ್ತವ, 2005 ರಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿ ಶೋ “ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್” ನ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ ನಂತರ ಜನಪ್ರಿಯತೆ ಪಡೆದಿದ್ದರು. ಅವರು “ಮೈನೆ ಪ್ಯಾರ್ ಕಿಯಾ”, “ಬಾಜಿಗರ್”, “ಬಾಂಬೆ ಟು ಗೋವಾ” (ರೀಮೇಕ್) ಮತ್ತು “ಆಮ್ದಾನಿ ಅಥಾನಿ ಖರ್ಚಾ ರುಪೈಯಾ” ಮುಂತಾದ ಹಿಂದಿ ಚಲನಚಿತ್ರಗಳಲ್ಲಿಯೂ ನಟಿಸಿದ್ದಾರೆ. ರಾಜು ಶ್ರೀವಾಸ್ತವ ಅವರು ಉತ್ತರ ಪ್ರದೇಶದ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿದ್ದಾರೆ.

 

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.