ವಾಣಿಜ್ಯ ಜಾಹಿರಾತು
ಮಂಗಳೂರು: ಕರ್ನಾಟಕ ಸರ್ಕಾರದ 2021-22ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪ್ರಶಸ್ತಿ’ಗೆ ವಾಣಿಜ್ಯ ತೆರಿಗೆ ಪರಿವೀಕ್ಷಕ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಆಯ್ಕೆಯಾಗಿದ್ದು, ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿದ್ದಾರೆ.
ಜುಲೈ 1ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಅವರು ಪ್ರಸ್ತುತ ಮಂಗಳೂರಿನ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಎಸ್ ಟಿ ತೆರಿಗೆ ಸಂಗ್ರಹಣೆಯಲ್ಲಿ ನಿರ್ವಹಿಸಿದ ಕೆಲಸಗಳು, ತೆರಿಗೆ ಆಡಳಿತ, ತೆರಿಗೆ ಕಾಯ್ದೆಗಳ ಬಗೆಗೆ ಅರಿವು-ಜಾಗೃತಿ ಮೂಡಿಸಿರುವುದು, ತೆರಿಗೆ ವಂಚಕರ ಜಾಲವನ್ನು ಪತ್ತೆಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಲ್ಲಿ ನಿರ್ವಹಿಸಿದ ಮಹತ್ವದ ಕೆಲಸಗಳನ್ನು ಪರಿಗಣಿಸಿ ‘ಮುಖ್ಯಮಂತ್ರಿಗಳ ಪ್ರಶಸ್ತಿ’ ನೀಡಲಾಗಿದೆ.
ವಾಣಿಜ್ಯ ಜಾಹಿರಾತು