ಬೆಳ್ತಂಗಡಿ: ಉಜಿರೆಯ ಲಾಡ್ಜ್ ಒಂದರಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅನೈತಿಕ ಚಟುವಟಿಕೆಯ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ಲಾಡ್ಜ್ ಬೆಳ್ತಂಗಡಿ ವೃತ್ತನಿರೀಕ್ಷಕರ ಸಮ್ಮುಖದಲ್ಲಿ ಲಾಡ್ಜ್ ಮಾಲೀಕರನ್ನು ಕರೆಸಿ ಸಭೆ ನಡೆಸಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಪೊಲೀಸರ ಮಾತಿಗೆ ಕ್ಯಾರೆ ಅನ್ನದ ಲಾಡ್ಜ್ ಮಾಲೀಕರು ರಾಜಾರೋಶವಾಗಿ ವೇಶ್ಯಾವಾಟಿಕೆ ದಂಧೆ ನಡೆಸಲು ಮುಂದಾಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು, ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ ಪಿ ಪ್ರತಾಪ್ ಸಿಂಗ್ ಥೋರಟ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದೆ.
ಈ ಕುರಿತು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖರ ಮಾಹಿತಿ ಆಧರಿಸಿ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ದಾಳಿಯ ವೇಳೆ ಐವರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.