ವಾಣಿಜ್ಯ ಜಾಹಿರಾತು

ಮೈಸೂರು: ದಿವಂಗತ ನಟ ಪುನೀತ್ ರಾಜ್‍ಕುಮಾರ್, ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಇಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಮೈಸೂರು ವಿವಿಯ ಕ್ರಾಫರ್ಡ್ ಹಾಲ್‍ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಸಮಾರಂಭದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ನಂತರ ಪುನೀತ್ ರಾಜ್‍ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು.

ನಂತರ ಜಾನಪದ ಮಹಾನ್ ಕಲಾವಿದ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಷ್ಟ್ರೀಯ ಮೌಲ್ಯಾಂಕ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಡಾ.ಎಸ್.ಸಿ.ಶರ್ಮ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಎ.ಪಿ.ಜ್ಞಾನಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.

Ashwini Puneeth Rajkumar on Twitter: “On behalf of our family, friends & fans, It is an honour to receive the Doctorate for Shri Puneeth Rajkumar. I sincerely thank University of Mysore for their love & regards. ಶ್ರೀ ಪುನೀತ್ ರಾಜ್‍ಕುಮಾರ್ ಅವರಿಗೆ ಗೌರವಾನ್ವಿತ ಡಾಕ್ಟರೇಟ್ ನೀಡಿದ ಮೈಸೂರು ವಿಶ್ವವಿದ್ಯಾನಿಲಯಕ್ಕೆ ನನ್ನ ವಂದನೆಗಳು. https://t.co/ZMGsjEMfV7” / Twitter

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.