ವಾಣಿಜ್ಯ ಜಾಹಿರಾತು

ಪುತ್ತೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಕೌಡಿಚ್ಚಾರ್ ಬಳಿ ಸಂಭವಿಸಿದೆ.

ಕಾವು ಮುದ್ಧ ನಾರಾಯಣ ನಾಯ್ಕ ಮೃತ ವ್ಯಕ್ತಿ. ಅಪಘಾತದಲ್ಲಿ ಉಬರಡ್ಕ ನಿವಾಸಿ ಗುರುಪ್ರಸಾದ್ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತವಾಗಿ ಬಿದ್ದಿದ್ದ ಗಾಯಾಳುಗಳನ್ನು ಅದೇ ದಾರಿಯಾಗಿ ಹೋಗುತ್ತಿದ್ದ ಪುತ್ತೂರಿನ ಯುವ ನ್ಯಾಯಾವಾದಿ ಚಿನ್ಮಯ್ ರೈ ಈಶ್ವರಮಂಗಲ, ಅರಿಯಡ್ಕ ಶಕ್ತಿ ಕೇಂದ್ರದ ಬಿಜೆಪಿ ಸಚಿನ್ ಪಾಪೆಮಜಲು ಹಾಗೂ ಹಿಂಜಾವೆ ಪ್ರಮುಖ ಜಗದೀಶ್ ಅವರುಗಳು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ನಾರಾಯಣ ನಾಯ್ಕ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.