ವಾಣಿಜ್ಯ ಜಾಹಿರಾತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ‘ಮೋದಿ ಅವರೇ, ಹುಟ್ಟುಹಬ್ಬದ ಶುಭಾಶಯಗಳು’ ಎಂದು ಶುಭ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸದಾ ಟೀಕೆ ಮಾಡುತ್ತಿರುವ ರಾಹುಲ್ ಗಾಂಧಿ, ಶುಭ ಕೋರಿರುವುದು ರಾಜಕೀಯ ವಲಯದಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ, ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದ್ದಾರೆ. ಅಲ್ಲದೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯವನ್ನು ಬಯಸುತ್ತೇನೆ ಎಂದಿದ್ದಾರೆ.

ಬಿಜೆಪಿ ಮೂರು ವಾರಗಳ ಕಾಲ ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಆಚರಣೆಯನ್ನು ನಡೆಸಲಿದೆ. ಇದರಲ್ಲಿ ದೇಶದ
ಜನತೆಗೆ ಉಚಿತ ವ್ಯಾಕ್ಸಿನೇಷನ್ ಅಭಿಯಾನ, ಸ್ವಚ್ಛತೆ ಹಾಗೂ ಪರಿಸರ ಅಭಿಯಾನ, ಸಮಾರಂಭಗಳು ಸೇರಿವೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.