2017ರಲ್ಲಿ ತೆರೆಕಂಡ ಒಂದು ಮೊಟ್ಟೆಯ ಕಥೆ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ ನಟನೆಯ ಜೊತೆಗೆ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದಾರೆ. ಸಿಕ್ಕ ಪಾತ್ರಗಳನ್ನೇ ಅತ್ಯುತ್ತಮವಾಗಿ ಬಳಸಿಕೊಂಡು ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ರಾಜ್ ಬಿ ಶೆಟ್ಟಿ ಸದ್ಯ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜೊತೆ ಸಿನಿಮಾ ಮಾಡ್ತಿದ್ದಾರೆ. ಇದೀಗ ರಾಜ್ ಬಿ ಶೆಟ್ಟಿ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಗಾಂಧಿನಗರದಲ್ಲಿ ಸದ್ದು ಮಾಡುತ್ತಿರುವ ರಾಜ್ ಬಿ ಶೆಟ್ಟಿ ಇದೀಗ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಜಿಶೋ ಲೋನ್ ಆಂಟನಿ ನಿರ್ದೇಶನದ, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣ ಬಾಲಮುರಳಿ ನಾಯಕಿಯಾಗಿ ನಟಿಸುತ್ತಿರುವ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಳ್ತಿದ್ದಾರೆ. ಚಿತ್ರಕ್ಕೆ ‘ರುಧಿರಂ’ ಎಂದು ಟೈಟಲ್ ಇಡಲಾಗಿದ್ದು ಸದ್ಯ ಈ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ.
ರುದಿರಂ ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿದೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಈ ಸಿನಿಮಾ ರೆಡಿ ಆಗುತ್ತಿದ್ದು, ಹಿಂದಿಯಲ್ಲಿ ಮಾಡುವ ಕುರಿತು ಇನ್ನೂ ಮಾತುಕತೆ ನಡೆಯುತ್ತಿದೆ.