ವಾಣಿಜ್ಯ ಜಾಹಿರಾತು
ಮಂಗಳೂರು: ರೈಲು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ.
ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋದವರು ಎಷ್ಟು ಹೊತ್ತಾದರೂ ಮನೆಗೆ ವಾಪಸ್ಸಾಗಿಲ್ಲ. ಈ ವೇಳೆ ಜನಾರ್ದನ ಆಚಾರಿ ಅವರಿಗೆ ಹುಡುಕಾಟ ನಡೆಸಿದಾಗ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಜನಾರ್ದನ ಅವರ ಮೃತ ಪತ್ತೆಯಾಗಿದೆ.
ಮೃತ ಜನಾರ್ದನ ಅವರು ಸಿವಿಲ್ ಗುತ್ತಿಗೆದಾರರಾಗಿದ್ದು, ನೂರಕ್ಕೂ ಅಧಿಕ ಕಾರ್ಮಿಕರಿಗೆ ಕೆಲಸ ನೀಡಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೂ ಆಗಿದ್ದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ವಾಣಿಜ್ಯ ಜಾಹಿರಾತು