ವಾಣಿಜ್ಯ ಜಾಹಿರಾತು
ಉಡುಪಿ: ಮೀನುಗಳಿಗೆ ಫಾರ್ಮಾಲಿನ್ (ಶವ ಕೊಳೆಯದ ಹಾಗೆ ಬಳಸುವ ಕೆಮಿಕಲ್) ಬಳಕೆ ಮಾಡಿ ಜನರಿಗೆ ವಿಷ ಉಣಿಸುತ್ತಿರುವ ವ್ಯವಸ್ಥೆಯ ವಿರುದ್ಧ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಲಿ ಎಂಬ ಉದ್ದೇಶದಿಂದ ಸಾಮಾಜಿಕ ಹೋರಾಟಗಾರ ಆಲ್ವಿನ್ ಅಂದ್ರಾದೆ ಪಾಂಡೇಶ್ವರ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಈ ಮಾಫಿಯಾದ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಚೋರಾಡಿ ಕೃಷ್ಣರಾಜ್ ಶೆಟ್ಟಿ, ವಿನಯ್ ಕುಮಾರ್ ಕಬಿಯಾಡಿ ಮತ್ತು ಟೀಮ್ ಅಭಿಮತದ ವಸಂತ್ ಗಿಳಿಯಾರ್ ಉಪಸ್ಥಿತರಿದ್ದರು.
ವಾಣಿಜ್ಯ ಜಾಹಿರಾತು