ವಾಣಿಜ್ಯ ಜಾಹಿರಾತು

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಕೆ.ವಿ ರಾಜು ಅವರು ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಧಿವಶರಾಗಿದ್ದಾರೆ.

ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಕೆವಿ ರಾಜು ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆ.ವಿ ಜಯರಾಮ್ ಅವರ ಸಹೋದರರಾಗಿದ್ದ ಕೆ.ವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. 1984 ರ ‘ಒಲವೇ ಬದುಕು’ ಮೂಲಕ ಅವರು ಬರಹಗಾರ ಹಾಗೂ ನಿರ್ದೇಶಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು.

ಕೆ.ವಿ ರಾಜು ಅವರು ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. 1991ರಲ್ಲಿ ‘ಇಂದ್ರಜಿತ್’ ಚಿತ್ರದ ಮೂಲಕ ಬಾಲಿವುಡ್​ಗೂ ಕೆವಿ ರಾಜು ಪ್ರವೇಶಿಸಿದ್ದರು. ಅಮಿತಾಭ್ ಬಚ್ಚನ್ ಹಾಗೂ ಜಯಪ್ರದಾ ಆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.