ವಾಣಿಜ್ಯ ಜಾಹಿರಾತು
ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 74 ವರ್ಷ ವಯಸ್ಸಿನ ಲಕ್ಷ್ಮಣ್ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಲಕ್ಷ್ಮಣ್ ನಿಧನಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗ ಕಂಬನಿ ಮಿಡಿದಿದೆ.
ನಿನ್ನೆ ಸಂಜೆ ಲಕ್ಷ್ಮಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಇಸಿಜಿ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದಿದ್ದರು. ಇಂದು ಮುಂಜಾನೆ ಮತ್ತೆ ಎದೆ ನೋವು ಕಾಣಿಸಿಕೊಮಡು ಹೃದಯಾಘಾತವಾಗಿದೆ.
200ಕ್ಕೂ ಅಧಿಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಲಕ್ಷ್ಮಣ್ ಅವರು ಪೋಷಕ ಪಾತ್ರಗಳ ಮೂಲಕ ಸಾಕಷ್ಟು ಖ್ಯಾತಿ ಘಳಿಸಿದ್ದರು. ಅಂಬರೀಷ್, ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಕನ್ನಡದ ದಿಗ್ಗಜರ ಜೊತೆ ಲಕ್ಷ್ಮಣ್ ತೆರೆ ಹಂಚಿಕೊಂಡಿದ್ದರು.
ವಾಣಿಜ್ಯ ಜಾಹಿರಾತು