ವಾಣಿಜ್ಯ ಜಾಹಿರಾತು

ಮೂಡುಬಿದಿರೆ : ಶಾಲಾ ವಾಹನಕ್ಕೆ ಕಾರೊಂದು ಬುಧವಾರ ಸಾಯಂಕಾಲ ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಡುಬಿದಿರೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಆಲಂಗಾರಿನಲ್ಲಿ ಸಾಯಂಕಾಲ 4 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆಮ ಶಾಲಾ ಮಕ್ಕಳು ಅಪಾಯದಿಂದ  ಪಾರಾಗಿದ್ದಾರೆ.

ಮೂಡುಬಿದಿರೆ ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕೆಎ09 z 7481 ನಂಬರಿನ ಕಾರು ಆಲಂಗಾರು ಬಳಿ ಬ್ರೇಕ್ ಹಾಕಿದ್ದು ಆಗ ತಕ್ಷಣ ಕಾರು ಬಲಕ್ಕೆ ತಿರುಗಿ ಶಾಲಾ ವಾಹನದ ಕಡೆಗೆ ಬಂದಿದೆ ಆಗ ಶಾಲಾ ವಾಹನದ ಚಾಲಕ ಎಡ ಕಡೆಗೆ ವಾಹನವನ್ನು ತಿರುಗಿಸಿದ್ದು,ಆಗ  ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ನಿಂತಾಗ ಕಾರು ಅಲ್ಲಿಗೆ ಬಂದು ಗುದ್ದಿದೆ.

ಕಾರಿನ ಚಾಲಕನ ಮೂಗು ಮತ್ತು ಕಿವಿಯಿಂದ ರಕ್ತ ಹರಿಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದೆ. ಶಾಲಾ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.