ವಾಣಿಜ್ಯ ಜಾಹಿರಾತು

ಉಡುಪಿ: ನಾಡಿನ ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗೂ ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ.

2019ರಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ (ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಶ್ವಾಸಕೋಸದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ತೀರಾ ಗಂಭೀರ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕೋಮುವಾದದ ವಿರುದ್ಧ ಧ್ವನಿ ಎತ್ತಿ ಅದರ ವಿರುದ್ಧದ ಎಲ್ಲ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ರಾಜಶೇಖರ್ ಅವರು , ಕೋಮುಗಲಭೆಗಳು ನಡೆದ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮಾತನಾಡಿ ಸತ್ಯಶೋಧನಾ ವರದಿಗಳನ್ನು ಬರೆದಿದ್ದರು. ಅಲ್ಪಸಂಖ್ಯಾತರು, ದಲಿತ ದಮನಿತರು ಹಾಗು ಎಲ್ಲ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಹೋರಾಟದಲ್ಲಿ ಸದಾ ಮೊದಲಿಗರಾಗಿ ಭಾಗವಹಿಸುತ್ತಿದ್ದರು. ಅತ್ಯಂತ ನೇರ, ನಿಷ್ಠುರ ಮಾತುಗಳು ಹಾಗು ವಿಶ್ಲೇಷಣೆಗಳಿಗೆ ಅವರು ಖ್ಯಾತಿ ಪಡೆದಿದ್ದರು. ವಿಶೇಷವಾಗಿ ಕರಾವಳಿ ಜಿಲ್ಲೆಗಳ ಜನಪರ ಹೋರಾಟಗಳು ಹಾಗು ಹೋರಾಟಗಾರರ ಪಾಲಿನ ಅತ್ಯಂತ ಆಪ್ತ ಸ್ನೇಹಿತ ಹಾಗು ಮಾರ್ಗದರ್ಶಕರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.