ವಾಣಿಜ್ಯ ಜಾಹಿರಾತು
ಉಡುಪಿ: : ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಬ್ರಹ್ಮಾವರ ತಾಲೂಕು ಪಾರಂಪಳ್ಳಿ ನಿವಾಸಿ ಸೈಯದ್ ಬ್ಯಾರಿ ಮಗಳು ಮಿಸ್ರಿಯಾ (19) ಎಂದು ಗುರುತಿಸಲಾಗಿದೆ.
ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಸ್ರಿಯಾ ತಲೆನೋವು ಎಂದು ಕೊಣೆಗೆ ಹೋಗಿ ಮಲಗಿದ್ದು ಅಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಣಿಜ್ಯ ಜಾಹಿರಾತು