ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ನೂತನ ಸಿಬಿಐ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಆದೇಶದ ಪ‍್ರಕಾರ ಜೈಸ್ವಾಲ್ ಅವರ ಅಧಿಕಾರದ ಅವಧಿ ಎರಡು ವರ್ಷಗಳ ವರೆಗೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಆಯ್ಕೆ ಸಮಿತಿ ಸುಬೋಧ್ ಕುಮಾರ್ ಜೈಸ್ವಾಲ್ ಹೆಸರನ್ನು ಸಿಬಿಐ ನಿರ್ದೇಶಕ ಹುದ್ದೆಗೆ ಅಂತಿಮಗೊಳಿಸಿದೆ.
ಮಹಾರಾಷ್ಟ್ರದ ಮಾಜಿ ಡಿಜಿಪಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ಕಾಂಗ್ರೆಸ್ ಲೋಕಸಭಾ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ಸಭೆಯಲ್ಲಿ ಚರ್ಚಿಸಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನೂತನ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
IPS Subodh Kumar Jaiswal has been appointed as Director of Central Bureau of Investigation (CBI) for a period of 2 years pic.twitter.com/jFGwZbOen4
— ANI (@ANI) May 25, 2021
1985ನೇ ಬ್ಯಾಚ್ನ ಮಹಾರಾಷ್ಟ್ರ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಸುಭೋದ್ ಕುಮಾರ್ ಜೈಸ್ವಾಲ್ ಇದೀಗ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಇವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಿಬಿಐ ನಿರ್ದೇಶಕನ ಸ್ಥಾನಕ್ಕೆ ಸುಬೋಧ್ ಕುಮಾರ್ ಜೈಸ್ವಾಲ್ ಮಾತ್ರವಲ್ಲದೆ ಎಸ್ಎಸ್ಬಿ ಮುಖ್ಯಸ್ಥ ಕುಮಾರ್ ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ. ಕೌಮುದಿ ಹೆಸರು ಕೂಡಾ ಸಿಬಿಐ ನಿರ್ದೆಶಕರ ಹುದ್ದೆಯ ಆಯ್ಕೆಯ ಚರ್ಚೆಯಲ್ಲಿ ಕೇಳಿಬಂದಿತ್ತು.