ವಾಣಿಜ್ಯ ಜಾಹಿರಾತು
ಸುರತ್ಕಲ್: ಸುರತ್ಕಲ್ ಸಮೀಪದ ಬಾಂಗ್ಲಾ ವಠಾರದಲ್ಲಿ ಉಮೇಶ ಆಚಾರ್ಯ ಎಂಬುವವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ರಿಡ್ಜ್ ನಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯನ್ನು ಸಂಪೂರ್ಣ ವ್ಯಾಪಿಸಿದೆ. ತಕ್ಷಣವೇ ನೆರೆಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದರು. ವಿಷಯ ತಿಳಿದ ಕೂಡಲೆ ಅಗ್ನಿ ಶಾಮಕ ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸಲು ಮುಂದಾಗಿದೆ. ಆದರೆ ಅಷ್ಟರಲ್ಲಾಗಲೇ ಬೆಂಕಿ ಇಡೀ ಮನೆಯನ್ನೇ ಆವರಿಸಿಕೊಂಡಿತ್ತು.
ಮನೆಯಲ್ಲಿದ್ದ ಬಟ್ಟೆ, ಪಾತ್ರೆ, ಟಿವಿ ಸಹಿತ ಎಲ್ಲ ಉಪಕರಣಗಳು ಸುಟ್ಟು ಹೋಗಿದ್ದು ಸ್ಥಳಕ್ಕೆ ಶಾಸಕ ಡಾ. ಭರತ್ ಶೆಟ್ಟಿ ವೈ., ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯ ವರುಣ್ ಚೌಟ, ಉಮೇಶ್ ದೇವಾಡಿಗ ಇಡ್ಯಾ, ಉಪತಹಶೀಲ್ದಾರ್ ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಾಣಿಜ್ಯ ಜಾಹಿರಾತು