ವಾಣಿಜ್ಯ ಜಾಹಿರಾತು
ಮಂಗಳೂರು: ಸುರತ್ಕಲ್‌ನ ಕೃಷ್ಣಾಪುರ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ
ಕೃಷ್ಣಾಪುರದ ನಾಲ್ಕನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ ಬಂಧಿತ ಆರೋಪಿ. ಈತನನ್ನು ಕೊಲೆಗೆ ಸಹಕಾರ ನೀಡಿದ ಆರೋಪದಡಿಯಲ್ಲಿ ಬಂಧಿಸಲಾಗಿದೆ.
ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ (21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹಾಗು ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮೃತ ಜಲೀಲ್ ಫ್ಯಾನ್ಸಿ ಅಂಗಡಿಗೆ ನುಗ್ಗಿ ಆತನಿಗೆ ಚೂರಿಯಿಂದ ಇರಿದು ಹತ್ಯೆಗೈದಿದ್ದರು.
ಪೊಲೀಸ್ ತನಿಖಾ ತಂಡ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಮೊನ್ನೆ ರಾತ್ರಿಯೇ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು, ದಸ್ತಗಿರಿ ಮಾಡಿದೆ. ಇದೀಗ ಕೊಲೆಗೆ ಸಹಕಾರ ನೀಡಿದ ಆರೋಪದ ಮೇಲೆ ಮತ್ತೋರ್ವ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದೆ.
ವಾಣಿಜ್ಯ ಜಾಹಿರಾತು