ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಜೇಮ್ಸ್’ ಸಿನೆಮಾದ ಟೀಸರ್ ಶುಕ್ರವಾರ ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ
ಪುನೀತ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದ ಜೇಮ್ಸ್ ಚಿತ್ರದ ಟೀಸರ್‌ಗೆ ಫಿದಾ ಆಗಿದ್ದಾರೆ. ಟೀಸರ್ ನಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳಿದ್ದು, ಚಿತ್ರದ ಕುರಿತು ನಿರೀಕ್ಷೆಯನ್ನು ಹೆಚ್ಚಿಸಿವೆ. ಟೀಸರ್ ಬಿಡುಗಡೆಗೊಂಡ ಬಳಿಕ 3 ಮಿಲಿಯನ್ ಜನರು ಈಗಾಗಲೇ ವೀಕ್ಷಿಸಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಎಲ್ಲರ ಗಮನ ಸೆಳೆದಿದೆ.
ಜೇಮ್ಸ್ ಚಿತ್ರವನ್ನು ಚೇತನ್ ಕುಮಾರ್ ನಿರ್ದೇಶಿಸಿ, ಕಿಶೋರ್ ಪತ್ತಿಕೊಂಡ ನಿರ್ಮಿಸಿದ್ದಾರೆ. ಪುನೀತ್ ಗೆ ಶಿವರಾಜ್‌ಕುಮಾರ್ ಧ್ವನಿ ನೀಡಿದ್ದಾರೆ. ಅಲ್ಲದೇ ಶಿವಣ್ಣ, ರಾಘಣ್ಣ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪುನೀತ್ ರಾಜ್‌ಕುಮಾರ್ ಜನ್ಮದಿನವಾದ ಮಾರ್ಚ್ 17ರಂದು ಜೇಮ್ಸ್ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಕನ್ನಡ ಭಾಷೆಯ ಜೊತೆಗೆ ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲೂ ರಿಲೀಸ್ ಮಾಡಲು ಸಿದ್ಧತೆ ನಡೆದಿದೆ.
ಪುನೀತ್ ರಾಜ್‌ಕುಮಾರ್ ನಟನೆಯ ಕೊನೆಯ ಚಿತ್ರ ಇದಾಗಿದ್ದು, ಚಿತ್ರವನ್ನು ಕಣ್ತುಂಬಿಕೊಳ್ಳಲು ಅಪ್ಪು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.