ವಾಣಿಜ್ಯ ಜಾಹಿರಾತು
ಮೂಡುಬಿದಿರೆ: ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಶನಿವಾರ ಬೆಳಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ ಸಿಕ್ಕಿ ಹಾಕಿಕೊಂಡು ಅಪ್ಪಚ್ಚಿಯಾಗಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಕಾರು ಬೆಂಗಳೂರು ಮೂಲದೆಂದು ತಿಳಿದು ಬಂದಿದ್ದು, ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ಆರಂಭಿಸಿದ್ದಾರೆ.
ಮೂವರ ಮೃತದೇಹಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆಗೆಯಲಾಗಿದೆ.
ದಂಪತಿಗಳು ಮೂವತ್ತು ವರ್ಷದೊಳಗಿನವರೆಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ವಾಣಿಜ್ಯ ಜಾಹಿರಾತು