ವಾಣಿಜ್ಯ ಜಾಹಿರಾತು
ಸೌದಿ ಅರೇಬಿಯಾ: ಸೌದಿ ಅರೇಬಿಯಾದ ರಿಯಾದಿನ ಖುರೈಸ್ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಹಾಗೂ ಬಾಂಗ್ಲಾದೇಶದ ಓರ್ವ ಯುವಕ ಮೃತಪಟ್ಟಿದ್ದಾರೆ.
ಹಳೆಯಂಗಡಿಯ ಕದಿಕೆ ನಿವಾಸಿ ಝಿಝ್ವಾನ್, ಮಂಗಳೂರಿನ ಬೋಳಾರ್ ನಿವಾಸಿ ಅಕೀಲ್, ನಾಸಿರ್ ಹಾಗೂ ಬಾಂಗ್ಲಾದೇಶದ ಶಿಹಾಬ್ ಮೃತ ದುರ್ದೈವಿಗಳು.
ಮೃತ ನಾಲ್ವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಎಸ್ ಎ ಕ್ಯೂಸಿ ಒ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ಮೃತ ರಿಝ್ವಾನ್ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕಾಗಿ ಸೌದಿಗೆ ತೆರಳಿದ್ದರು.
ಸದ್ಯ ಮೃತ ದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ.
ವಾಣಿಜ್ಯ ಜಾಹಿರಾತು