ವಾಣಿಜ್ಯ ಜಾಹಿರಾತು

ಪುತ್ತೂರು:ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಪುನೀತ್ ಪೂಜಾರಿ ಎಂಬವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಬಳಲುತ್ತಿದ್ದು, ಇವರ ಚಿಕಿತ್ಸೆಗೆ 3 ಲಕ್ಷ ರೂಪಾಯಿ ಖರ್ಚಿನ ಅಗತ್ಯವಿದೆ. ಆದರೆ ಚಿಕಿತ್ಸೆಯ ವೆಚ್ಚವನ್ನು ಭರಿಸಲು ಪುನೀತ್ ಕುಟುಂಬಕ್ಕೆ ಅಸಾಧ್ಯವಾಗಿದೆ. ಇದನ್ನು ಮನಗಂಡ ’ಬಿರ್ವ ಬ್ರದರ್ಸ್ ಗ್ರೂಪ್ ’ ತಂಡ ರೂ. 10,000 ಸಹಾಯಧನವನ್ನು ನೀಡಿ ನೆರವಾಗಿದೆ. ಸಹಾಯಧನವನ್ನು 11ನೇ ಬಿಲ್ಲವ ಸೇವಾ ಯೋಜನೆಯ ಸಹಾಯಧನವನ್ನು ಬಿರ್ವ ಬ್ರದರ್ಸ್ ಕ್ರಿಕೆಟ್ ಪಂದ್ಯಾಟದ ಸಮಾರಂಭದಲ್ಲಿ ಪುನೀತ್ ಪೂಜಾರಿ ಅವರಿಗೆ ದಕ್ಷಿಣ ಶಿರಡಿ ಸಾಯಿ ಮಂದಿರದ ಧರ್ಮದರ್ಶಿಗಳಾದ ಸಾಯಿ ಸೂರಾಜ್ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ಬಿರ್ವ ಬ್ರದರ್ಸ್ ಗೂಪ್ ನ ಸ್ಥಾಪಕ ಅಶ್ವಿನ್ ಪೂಜಾರಿ ಕಾರಾಜೆ ಮತ್ತು ಸದಸ್ಯರು ಉಪಸ್ಥಿತರಿದ್ದರು.

  • ಸಹಾಯ ಸಣ್ಣಮಟ್ಟದ್ದಾಗಿರಲೀ, ದೊಡ್ಡದಾಗಿರಲೀ, ಸಹಾಯ ಸಹಾಯವೇ. ಯಾವುದೇ ಫಲಾಪೇಕ್ಷೆ ಇಲ್ಲದೇ, ನಿಸ್ವಾರ್ಥ ಮನಸ್ಸಿನಿಂದ ಮತ್ತೊಬ್ಬರಿಗೆ ಸಹಾಯಮಾಡುವ ಅದೆಷ್ಟು ಮಾನವೀಯಮುಖಗಳು ನಮ್ಮ ನಡುವೆ ಇದ್ದಾರೆ ಎನ್ನುವುದೇ ಹೆಮ್ಮೆ. ಇನ್ನೊಬ್ಬರ ಕಷ್ಟಕ್ಕೆ, ನೋವಿಗೆ ಸ್ಪಂದಿಸುವುದು ಸಹೃದಯಿಗಳಿಂದಷ್ಟೇ ಸಾಧ್ಯ. ಅಂತಹ ಸಹೃದಯಿಗಳು ತಾವಾಗಿದ್ದರೇ ಅಥವಾ ನಿಮಗೆ ತಿಳಿದಿದ್ದರೇ ಅಂಥವರನ್ನು ಪರಿಚಯಿಸುವುದು ನಮ್ಮ ಹೆಮ್ಮೆ. ‘ಸಹಾಯಹಸ್ತ’ ಎನ್ನುವ ಶೀರ್ಷಿಕೆಯಡಿ ನಾವು, ನೆರವಾದವರು ಹಾಗೂ ನೆರವು ಯಾಚಿಸುವವರಿಗೆ ಸಂಬಂಧಿಸಿ ವರದಿ ಪ್ರಕಟಿಸುತ್ತೇವೆ. ಇದರಿಂದ ನಿಮ್ಮ ಕಾರ್ಯಕ್ಕೆ ಶ್ಲಾಘನೆ, ನೆರವು ನೀಡಲು ಪ್ರೇರಣೆ ಜೊತೆಗೆ ಅಗತ್ಯವುಳ್ಳವರಿಗೆ ನೆರವು ಸಿಗಬಹುದೆಂಬ ನಿರೀಕ್ಷೆ ನಮ್ಮದು. ಒಂದು ಮಾತು, ನೀವು ಸಹಾಯಮಾಡುತ್ತಿರುವ ಭಾವಚಿತ್ರವನ್ನು ನಾವಿಲ್ಲಿ ಪ್ರಕಟಿಸುವುದಿಲ್ಲ. ನಿಮ್ಮ/ಸಂಘಟನೆ ಹೆಸರು ಪ್ರಕಟಿಸುತ್ತೇವೆ. ನೀವು ಬಯಸಿದ್ದಲ್ಲಿ ನಿಮ್ಮ/ ಸಂಘಟನೆ ಸದಸ್ಯರ ಭಾವಚಿತ್ರ ಮಾತ್ರ ಪ್ರಕಟಿಸುತ್ತೇವೆ. ಇನ್ನು ಸಹಾಯದ ನಿರೀಕ್ಷೆಯಲ್ಲಿರುವವರು ನೀವಾಗಿದ್ದರೇ, ನಿಮ್ಮ ಅನುಮತಿ ಇದ್ದಲ್ಲಿ ಮಾತ್ರ ಭಾವಚಿತ್ರ ಪ್ರಕಟಿಸುತ್ತೇವೆ.
    ವಿವರಗಳನ್ನು ನಮ್ಮ ಸಂಖ್ಯೆ 6363376133 , 9019944921 ವಾಟ್ಸ್ಸ್ಯಾಪ್ ಮಾಡಿ. ಅಥವಾ [email protected] ಇ-ಮೈಲ್ ಮಾಡಿ.
ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here