ವಾಣಿಜ್ಯ ಜಾಹಿರಾತು
ಮಂಗಳೂರು: ಸ್ನಾನ ಮಾಡಲು ನದಿಗೆ ಇಳಿದಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ಮಹಮ್ಮದ್ ಸಲ್ಮಾನ್ ಮೃತ ಬಾಲಕ.
ಮೃತ ಮಹಮ್ಮದ್ ಸಲ್ಮಾನ್ ತನ್ನ ಸೋದರ ಸಂಬಂಧಿ 16 ವರ್ಷದ ಮಹಮ್ಮದ್ ಇರ್ಫಾರ್ ಜೊತೆ ಪೆರ್ನೆಯಲ್ಲಿನ ತನ್ನ ಚಿಕ್ಕಮ್ಮನ ಮನೆಗೆ ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡಲು ಇಬ್ಬರು ಬಿಳಿಯೂರಿನ ಅಣೆಕಟ್ಟಿನ ಬಳಿ ನದಿಗೆ ಇಳಿದಿದ್ದಾರೆ. ಈ ವೇಳೆ ಸಲ್ಮಾನ್ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ. ಈ ವೇಳೆ ಜೊತೆಗಿದ್ದ ಮಹಮ್ಮದ್ ಇರ್ಫಾರ್ ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಣಿಜ್ಯ ಜಾಹಿರಾತು