ಬೆಂಗಳೂರು: ಟೂಲ್ ಕಿಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿಗೆ ದೆಹಲಿ ಪಟಿಯಾಲ ಹೌಸ್ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ದಿಶಾ ರವಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ, ದಿಶಾ ರವಿ ಅವರಿಗೆ 1 ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ.
ದಿಶಾ ರವಿ ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪೊಲೀಸರು, ದಿಶಾ ರವಿ ಭಾರತವನ್ನು ಅವಹೇಳನ ಮಾಡಲು ಮತ್ತು ರೈತರ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಯನ್ನು ಉಂಟುಮಾಡುವ ಜಾಗತಿಕ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬುದನ್ನು ವಿವರಿಸುವ ‘ಟೂಲ್ ಕಿಟ್’ ಅನ್ನು ಸಿದ್ಧಪಡಿಸಿ, ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ ಬರ್ಗ್ ಅವರಿಗೆ ಕಳುಹಿಸಿದ ಮತ್ತು ದೇಶ ವಿರೋಧಿ ಚಟುವಟಿಕೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ದಿಶಾ ಅವರನ್ನು ದೆಹಲಿ ಪೊಲೀಸರ ಸೈಬರ್ ಸೆಲ್ ಫೆ.13ರಂದು ಬೆಂಗಳೂರಿನಿಂದ ಬಂಧಿಸಿ ದೆಹಲಿಗೆ ಕರೆತಂದಿತ್ತು.
ಟೂಲ್ಕಿಟ್ ಪ್ರಕರಣದಲ್ಲಿ ಬಂಧನವಾಗಿದ್ದ ಬೆಂಗಳೂರಿನ ದಿಶಾ ರವಿಗೆ ಜಾಮೀನು
ವಾಣಿಜ್ಯ ಜಾಹಿರಾತು
ವಾಣಿಜ್ಯ ಜಾಹಿರಾತು