ಉಡುಪಿ: ಶ್ರೀಕೃಷ್ಣಮಠಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದರು.
ಉಡುಪಿ ಜಿಲ್ಲಾ ರಜತಮಹೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸಿದ ರಾಜ್ಯಪಾಲರನ್ನು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.
ರಾಜ್ಯಪಾಲರು ಶ್ರೀಕೃಷ್ಣನ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಹಾರ ,ಫಲವಸ್ತುಗಳನ್ನು ಸಲ್ಲಿಸಿ ಗೌರವಿಸಿದರು.
ಪರ್ಯಾಯ ಶ್ರೀಪಾದರು ರಾಜ್ಯಪಾಲರನ್ನು ಸ್ಮರಣಿಕೆ ಹಾಗೂ ಶ್ರೀಕೃಷ್ಣನ ಪ್ರಸಾದ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರುಗಳಾದ ಸುನಿಲ್ ಕುಮಾರ್ , ಅಂಗಾರ, ಉಡುಪಿ ಶಾಸಕರಾದ ಕೆ.ರಘುಪತಿ ಭಟ್, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಬಿಜೆಪಿಯ ಉದಯಕುಮಾರ ಶೆಟ್ಟಿ , ಜಿಲ್ಲಾಧಿಕಾರಿಗಳು ಮತ್ತು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ , ಪಾರುಪತ್ಯಗಾರರಾದ ಶ್ರೀನಿವಾಸ ಉಪಾಧ್ಯಾಯ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ವಾಸುದೇವ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು .