ವಾಣಿಜ್ಯ ಜಾಹಿರಾತು
ಉಡುಪಿ: ಟ್ಯಾಂಕರ್ ನ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ರಾಕೇಶ್ (27) ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ ಇಂದು ಮುಂಜಾನೆ ಅಪಘಾತ ನಡೆದಿತ್ತು.
ರಾಕೇಶ್ ಮಂಗಳವಾರ ರಾತ್ರಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸಿ, ಬುಧವಾರ ಮುಂಜಾನೆ ಉಡುಪಿಯಲ್ಲಿರುವ ತಂಗಿಯ ಮನೆಗೆ ತೆರಳುತ್ತಿದ್ದಾಗ ಟ್ಯಾಂಕರ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳು ರಾಕೇಶ್ ಅವರನ್ನು ಸ್ಥಳೀಯರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಬಳಿಕ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಕೇಶ್ ಮೃತಪಟ್ಟಿದ್ದಾರೆ.
ವಾಣಿಜ್ಯ ಜಾಹಿರಾತು