ವಾಣಿಜ್ಯ ಜಾಹಿರಾತು
ಉಡುಪಿ : ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದ ನಿಟ್ಟಿನಲ್ಲಿ ನಗರಾಭಿವೃದ್ದಿ ಕಾಮಗಾರಿಗಳು, ಕುಡಿಯುವ ನೀರು ಯೋಜನೆ, ಒಳಚರಂಡಿ ಯೋಜನೆಗಳು ಪ್ರಕ್ರಿಯೆಯಲ್ಲಿದೆ ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಬಸವರಾಜ್ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಪು ವಿದಾಸಭಾ ಕ್ಷೇತ್ರದ ನಿಟ್ಟಿನಲ್ಲಿ ಕುಡಿಯುವ ನೀರಿನ ಯೋಜನೆಗೆ ಸುಮಾರು 46 ಕೋಟಿ ರೂ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ  ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಉಡುಪಿ ನಗರಸಭೆಯ ಒಳಚರಂಡಿ ವ್ಯವಸ್ಥೆ ಡಿಪಿಆರ್ ಮಾಡಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಉಡುಪಿ ಪ್ರಾದಿಕಾರದಿಂದ ಬಡಾವಣೆಗಳನ್ನು ನಿರ್ಮಾಣ ಮಾಡಲು ಸೂಚನೆಯನ್ನು ಕೂಡ ನೀಡಲಾಗಿದೆ ಎಂದರು.
ಪತ್ರಕರ್ತರು ಸಾರ್ವಜನಿಕವಾಗಿ ಸರ್ಕಾರಕ್ಕೆ ಮತ್ತು ಜನತೆಗೆ ಸಹಾಕರವನ್ನು ನೀಡುತ್ತಾ ಬಂದಿದ್ದಾರೆ. ಪ್ರಾಧಿಕಾರದಿಂದ ಅಭಿವೃದ್ದಿಪಡಿಸುವ ಬಡಾವಣೆಗಳಲ್ಲಿ ಪತ್ರಕರ್ತರಿಗೆ ಶೇ 5% ಮೀಸಲಾತಿ ನೀಡಬೇಕು ಎಂಬ ಸುತ್ತೊಲೆಯನ್ನು  2 ದಿನದಲ್ಲಿ ಹೊರಡಿಸಲಾಗುವುದು ಎಂದರು. ಸ್ಥಳೀಯ ಸಂಸ್ಥೆಗಳಿಗೆ  ಆಯ್ಕೆ  ಆದವರಿಗೆ , ರಿರ್ಸವೇಷನ್ ಬಗ್ಗೆ 3-4 ಸಭೆ ನಡೆಸಿ,  ಅಂತಿಮ ತೀರ್ಮಾನ ಮಾಡಿ , ಅದನ್ನು ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ನಂತರದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ನಡೆಯಲಿದೆ ಎಂದರು.
ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ನಗರಾಭಿವೃದ್ದಿ ಇಲಾಖೆ ಸಚಿವ ಬಸವರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲೆಯಲ್ಲಿ ನಗರಾಭಿವೃದ್ದಿ ಇಲಾಖೆಯ ಮೂಲಕ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಮುಕ್ತಾಯಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿ, ಕಾಮಗಾರಿಗಳ ವಿಳಂಬಕ್ಕೆ ಆಸ್ಪದ ನೀಡಬೇಡಿ ಎಂದು ಸಚಿವರು ಸೂಚಿಸಿದರು.
ಕುಂದಾಪುರ ಪಟ್ಟಣದ ಒಳಚರಂಡಿ ಯೋಜನೆ 2017 ಕ್ಕೆ ಮುಕ್ತಾಯಗೊಳ್ಳಬೇಕಾಗಿದ್ದು, ಇದುವರೆಗೆ ಮುಕ್ತಾಯಗೊಳ್ಳದ ಕುರಿತು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಕಾರ್ಕಳ ಪಟ್ಟಣದ ಒಳಚರಂಡಿ ಯೋಜನೆಗಳನ್ನು ಶೀಘ್ರದಲ್ಲಿ ಮುಗಿಸುವಂತೆ ತಿಳಿಸಿದರು. ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ವತಿಯಿಂದ ವ್ಯವಸ್ಥಿತ ಲೇ ಔಟ್ ನಿರ್ಮಾಣ ಮಾಡುವಂತೆ ಸೂಚಿಸಿದ ಸಚಿವರು, ಹೊಸ ಯೋಜನೆಯಂತೆ ಖಾಸಗಿಯವರಿಂದ ಜಮೀನು ಪಡೆದು 50-50 ಅನುಪಾತದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಲೇ ಔಟ್ ಅಭಿವೃದ್ಧಿ ಪಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗಹ್ಲೋತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.
ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.