ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ (80) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆ ಕೃಷ್ಣೇಗೌಡರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣಗೌಡರು ಮತ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಇತ್ತೀಚಿಗಷ್ಟೆ ಕೃಷ್ಣೇಗೌಡರ ಮಗ ಕೊರೊನಾ ಸೋಂಕಿಗೆ ಒಳಪಟ್ಟು ಮೃತಪಟ್ಟಿದ್ದರು. ಮಗ ಸಾವನ್ನಪ್ಪಿದ ಕೆಲವೇ ದಿನದಲ್ಲಿ ಕೃಷ್ಣೇಗೌಡರು ವಿಧಿವಶರಾಗಿರುವುದು ಕುಟುಂಬ ಮತ್ತು ಆಪ್ತರಲ್ಲಿ ದುಃಖ ತಂದಿದೆ.
ಹಿರಿಯ ನಟ ಬಿ.ಎಂ.ಕೃಷ್ಣೇಗೌಡ ಅಗಲಿಕೆಗೆ ಕನ್ನಡ ಚಿತ್ರರಂಗದ ಗಣ್ಯರು, ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ನಾಟಕದಲ್ಲಿ ಪಕ್ಷದ ಅಧ್ಯಕ್ಷನ ಪಾತ್ರವನ್ನು ಮಾಡಿದ್ದ ಕೃಷ್ಣೇಗೌಡರಿಗೆ ಹೆಚ್ಚು ಪ್ರಸಿದ್ಧಿ ನೀಡಿತ್ತು. ಹಾಲುಂಡ ತವರು, ಚಕ್ರವ್ಯೂಹ, ಸಂಸಾರ ನೌಕೆ, ಒಲವಿನ ಉಡುಗೊರೆ ಸೇರಿದಂತೆ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನೆಯಲ್ಲೇ ಹೆಚ್ಚು ಖ್ಯಾತಿ ಪಡೆದಿದ್ದ ಕೃಷ್ಣೇಗೌಡರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಗಳಿಸಿತ್ತು.