ವಾಣಿಜ್ಯ ಜಾಹಿರಾತು

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಸಚಿವ ಮುನಿರತ್ನ ಭೇಟಿ ನೀಡಿ, ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕಿ ಮತ್ತು ಎಲೆ ರೋಗ ಬಾಧಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.

ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ರೋಗ ಬಾಧಿತ ನಾಲ್ಕು ಕೃಷಿಕರ ತೋಟಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡ ಸಚಿವರು, ರೈತರ ಅಹವಾಲುಗಳನ್ನು ಆಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಭಾಗದ ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿತ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದೇನೆ. ಸರ್ಕಾರದಿಂದ ಈಗಾಗಲೇ ಕೆಮಿಕಲ್ ಸಿಂಪಡಣೆ ಮಾಡೋದಕ್ಕೆ 4 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನೂ 15 ಕೋಟಿಯ ಶಿಫಾರಸುಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ. ಇದಕ್ಕಿಂತ ಮಿಗಿಲಾಗಿ ಈ ರೋಗಗಳು ಯಾಕೆ ಬರುತ್ತಿವೆ ಎಂಬ ಬಗ್ಗೆ ಸಂಶೋಧನೆ ಆಗಬೇಕಿದೆ. ಅದಕ್ಕಾಗಿ ಮುಂದಿನ ತಿಂಗಳು ಇಸ್ರೇಲ್ ಗೆ ಹೋಗುತ್ತಿದ್ದೇನೆ. ಅಲ್ಲಿನ ವಿಜ್ಞಾನಿಗಳ ಜೊತೆ ಚರ್ಚೆ ಮಾಡಿ ನಂತರ ಪರಿಹಾರ ಕಂಡುಕೊಳ್ಳಬಹುದು ಎಂದರು.

ರೈತರೊಂದಿಗೆ ನಾವು ಇದ್ದು, ಪರಿಹಾರ ಹುಡುಕಬೇಕಿದೆ. ಈಗ ಮಾಡುತ್ತಿರುವುದು ತಾತ್ಕಾಲಿಕ ಪರಿಹಾರ ಅಷ್ಟೇ. ಇನ್ನು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಸಚಿವ ಮುನಿರತ್ನ ತಿಳಿಸಿದರು. ಈ ವೇಳೆ ಸಚಿವ ಎಸ್ ಅಂಗಾರ ಸೇರಿದಂತೆ ಅಧಿಕಾರಿಗಳು, ಕೃಷಿಕರು ಉಪಸ್ಥಿತರಿದ್ದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.