ವಾಣಿಜ್ಯ ಜಾಹಿರಾತು
ಬಂಟ್ವಾಳ: ಮಹಿಳೆಯೋರ್ವರಿಗೆ ಚೂರಿಯಿಂದ ಇರಿದು ಕೊಲೆಗೈದ ಘಟನೆ ವಿಟ್ಲ ಸಮೀಪದ ಮಾಣಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮಾಣಿಯ ಕಾಪಿಕಾಡು ನಿವಾಸಿ ದಿ.ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿನಗರ ನಿವಾಸಿ ಶಕುಂತಳ(35) ಮೃತ ಮಹಿಳೆ.
ಮಹಿಳೆ ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಮಾರಕಾಯುಧಗಳಿಂದ ಆಕೆಯ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಣಿಜ್ಯ ಜಾಹಿರಾತು