ವಾಣಿಜ್ಯ ಜಾಹಿರಾತು
ಬಂಟ್ವಾಳ: ಪಾಣೆಮಂಗಳೂರು ನೂತನ ಸೇತುವೆ ಬಳಿ ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ನದಿಯಲ್ಲಿ ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿ ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ,ಅವರ ಅಕ್ಕನ ಮನೆ ಬಿಸಿರೋಡಿನ ಚಿಕ್ಕಯ್ಯಮಠ ಎಂಬಲ್ಲಿ ಕೆಲದಿನಗಳಿಂದ ತಂಗಿದ್ದರು. ಶುಕ್ರವಾರ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಅವರು ಇಂದು ಮುಂಜಾನೆ 5 ಗಂಟೆಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಮನೆಯವರು ಅವರಿಗಾಗಿ ಹುಡುಕಾಟ ನಡೆಸಿದ್ದು, ಪಾಣೆಮಂಗಳೂರು ನೂತನ ಸೇತುವೆ ಯ ಮೇಲೆ ಮಹಿಳೆ ಬಳಸುತ್ತಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ ಬಿದ್ದಿರುವುದು ಕಂಡುಬಂದಿದೆ ಎನ್ನಲಾಗಿದೆ. ಹಾಗಾಗಿ ನದಿಗೆ ಹಾರಿರುವ ಸಂಶಯ ವ್ಯಕ್ತವಾಗಿದ್ದು, ಮುಳುಗುತಜ್ಞರು ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.
ವಾಣಿಜ್ಯ ಜಾಹಿರಾತು